ಸದ್ಯೋಜಾತ ವಾಮದೇವ ಅಘೋರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ್ಯವೆಂಬ ಐವರನೆತ್ತಿ ನುಂಗಿದ ಅವಿರಳ ಪರಬ್ರಹ್ಮ ನೋಡಾ. ಆ ಪರಬ್ರಹ್ಮವ ನುಂಗಿದನು ನಿರವಯ. ನಿರವಯವ ನುಂಗಿದ ನಿರಾಳ. ನಿರಾಳವ ನುಂಗಿದ ನಿತ್ಯ ನಿರಂಜನ ಪರವಸ್ತು ನೋಡಾ. ಇವರೆಲ್ಲರ ನುಂಗಿದ ಪರವಸ್ತು ಎನ್ನ ನುಂಗಿತ್ತಾಗಿ
ಆ ಪರವಸ್ತುವ ನಾನು ನುಂಗಿದೆನಾಗಿ
ನಿಃಶಬ್ದಮಯವಾಯಿತ್ತು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.