ಸಮಚಿತ್ತವೆಂಬ ನೇಮದ ಹಲಗೆಯ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು
ಶಿವಚಿತ್ತವೆಂಬ ಕೂರಲಗ ಕೊಂಡು
ಶರಣಾರ್ಥಿಯೆಂಬ ಶ್ರವಗಲಿತಡೆ
ಆಳುತನಕ್ಕೆ ದೆಸೆಯಪ್ಪೆ ನೋಡಾ. ಮಾರಂಕ ಜಂಗಮ ಮನೆಗೆ ಬಂದಲ್ಲಿ ಇದಿರೆತ್ತಿ ನಡೆವುದು
ಕೂಡಲಸಂಗಮದೇವನನೊಲಿಸುವಡಿದು ಚಿಹ್ನ !