ವಿಷಯಕ್ಕೆ ಹೋಗು

ಸಮಯದಲ್ಲಿ ಸಮ್ಮತನು ಆಚಾರದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಸಮಯದಲ್ಲಿ ಸಮ್ಮತನು ಆಚಾರದ ನೆಲೆಯನರಿದು
ಹೃದಯದ ಕತ್ತಲೆಯ ಉದಯದಲ್ಲಿಯೇ ಕಳೆದ. ಮುಟ್ಟುವುದ ಮುಟ್ಟದೆ ಕಳೆದ; ಮುಟ್ಟದುದ ಮುನ್ನವೆ ಕಳೆದ. ಅಯ್ಯಾ ಆಯ್ಯಾ ಎಂದಲ್ಲಿಯೆ ಕಲಿಯಾದ. ಕೇಸರಿಸಮ ಜೋಗ; ಐದರ ಮದಸೇನೆ ಮುರಿಯಿತ್ತು
ಎನ್ನೊಡೆಯ ಕೂಡಲಚೆನ್ನಸಂಗಯ್ಯ ಹಿಡಿವಡೆದ