ವಿಷಯಕ್ಕೆ ಹೋಗು

ಸಮಯವಿರೋಧವಾದೀತೆಂದು ಪಾದಾರ್ಚನೆಯ ಮಾಡುವರಯ್ಯಾ.

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸಮಯವಿರೋಧವಾದೀತೆಂದು ಪಾದಾರ್ಚನೆಯ ಮಾಡುವರಯ್ಯಾ. ಲಿಂಗಜಂಗಮಕ್ಕೆ ಪಾದವಾವುದು ? ಅರ್ಚನೆ ಯಾವುದು ? ಎಂಬ ತುದಿ ಮೊದಲನರಿಯರು. ಉದಾಸೀನದಿಂದ ಪಾದಾರ್ಚನೆಯ ಮಾಡಿ
ಪಾದೋದಕ ಧರಿಸಿದಡೆ ಅದೇ ಪ್ರಳಯಕಾಲಜಲ. ವರ್ಮವನರಿದು ಕೊಂಡಡೆ ತನ್ನ ಭವಕ್ಕೆ ಪ್ರಳಯಕಾಲಜಲ ! ಈ ಉಭಯವ ಭೇದಿಸಿ ಸಂಸಾರಮಲಿನವ ತೊಳೆವಡೆ ಕೂಡಲಚೆನ್ನಸಂಗಾ ಈ ಅನುವ ನಿಮ್ಮ ಶರಣ ಬಲ್ಲ.