ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು. ಮಾಡಿದಡೆ ಮಾಡಲಿ
ಮಾಡಿದಡೆ ತಪ್ಪೇನು ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ ಅದು ಪ್ರಸಾದವಲ್ಲ
ಕಿಲ್ಬಿಷ. ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದಡೆ
ಅದು ಲಿಂಗಕ್ಕೆ ಬೋನ. ಇದು ಕಾರಣ
ಕೂಡಲಸಂಗಮದೇವಾ
ಇಂತಪ್ಪ ಸದಾಚಾರಿಗಳನೆನಗೆ ತೋರಾ 400