Library-logo-blue-outline.png
View-refresh.svg
Transclusion_Status_Detection_Tool

ಸಮಸ್ತ ಲೋಕಾದಿ ಲೋಕಂಗಳಿಲ್ಲದಂದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಸಮಸ್ತ ಲೋಕಾದಿ ಲೋಕಂಗಳಿಲ್ಲದಂದು ಅನಾದಿಪರಶಿವ ನೀನೊರ್ಬನೆ ಇರ್ದೆಯಯ್ಯ. ಆ ನಿರಕಾರ ಪರಶಿವನಿಂದ ನಾನುದಯವಾಗಿ
ಮಾಯಾರಂಜನೆ ಹುಟ್ಟದ ಮುನ್ನ ನಿರಂಜನನೆಂಬ ಗಣೇಶ್ವರನಾಗಿರ್ದೆನು. ಜ್ಞಾನಾಜ್ಞಾನಗಳಿಲ್ಲದಂದು ಜ್ಞಾನಾನಂದನೆಂಬ ಗಣೇಶ್ವರನಾಗಿರ್ದೆನು. ಈ ಶರೀರವಿಲ್ಲದಂದು ನಿರ್ಮಲನೆಂಬ ಗಣೇಶ್ವರನಾಗಿರ್ದೆನು. ಬಸವ ಮೊದಲಾದ ಪ್ರಮಥರೆಲ್ಲರೂ ಪ್ರಸಾದವ ಎನ್ನಲ್ಲಿ ಸಂಬಂಧಿಸಿ
ನಿನ್ನ ಕೃಪಾಪ್ರಸಾದವನೆನ್ನಲ್ಲಿ ಮೂರ್ತಿಗೊಳಿಸಿ
`ಇನ್ನಾವುದಕ್ಕೂ ಅಂಜಬೇಡ'ವೆಂದು
ನೀನು
ನಿನ್ನ ಪ್ರಮಥರು ಎನ್ನ ಆಜ್ಞಾಪಿಸಿ ಮತ್ರ್ಯಕ್ಕೆ ಕಳುಹಿದಿರಿಯಾಗಿ
ಕಳುಹಿದ ಭೇದವ ಶಿವಜ್ಞಾನೋದಯದಿಂದ ಅರಿದು ಸಿದ್ಧಲಿಂಗನೆಂಬ ನಾಮ ಎನಗೆ ನಿನ್ನಿಂದ ಬಂದಿತ್ತೆಂಬುದ ಅರಿದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.