ಸಮುದ್ರದೊಳಗೆ ನೊರೆ ತೆರೆಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಮುದ್ರದೊಳಗೆ ನೊರೆ ತೆರೆಗಳು ನೆಗಳ್ದವೆಂದಡೆ ತಾ ಸಮುದ್ರದಿಂದ ಅನ್ಯವಪ್ಪವೆ ? ನಿರ್ವಿಕಾರ ನಿತ್ಯ ನಿರಂಜನ ನಿರ್ಗುಣ ಪರಿಪೂರ್ಣ ನಿರ್ವಿಕಲ್ಪ ಪರಬ್ರಹ್ಮಶಿವನಿಂದ ಜಗತ್ತು ಉದಯಿಸಿತ್ತು ಎಂದಡೆ ಶಿವನಿಂದ ಅನ್ಯವೆನಬಹುದೆ ? ಇಂತಪ್ಪ ಅರಿವು
ನೀವು ಕೊಟ್ಟ ಸಮ್ಯಕ್ ಜ್ಞಾನಕ್ಕೆ ಅರಿದಪ್ಪುದಯ್ಯಾ ಗುಹೇಶ್ವರಾ