ಸರ್ವೇಂದ್ರಿಯ ಸಮ್ಮತವಾಗಿ ಸರ್ವಕರಣಂಗಳ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸರ್ವೇಂದ್ರಿಯ ಸಮ್ಮತವಾಗಿ ಸರ್ವಕರಣಂಗಳ ಸಮಾಧಾನವ ಮಾಡಿ
ಸಮಸ್ತ ಸುಖಭೋಗಾದಿಗಳ ಬಯಸದೆ
ತನ್ನ ಮರೆದು ಶಿವತತ್ವವನರಿದು
ಅಹಂಕಾರ ಮಮಕಾರವಿಲ್ಲದೆ
ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿಪುಟಿಯ ಮೀರಿ
ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ ಮಲತ್ರಯಗಳನಳಿದು
ಸ್ತುತಿ_ನಿಂದಾದಿ
ಕಾಂಚನ ಲೋಷ*ಂಗಳ ಸಮಾನಂಗಂಡು
ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯಾದಿ ಪದಂಗಳ ಬಯಸದೆ
ವೇದ ವೇದಾಂತ ತರ್ಕ ವ್ಯಾಕರಣ ದರ್ಶನ ಸಂಪಾದನೆಗಳ ತೊಲಗಿಸಿ
ಖ್ಯಾತಿ ಲಾಭದ ಪೂಜೆಗಳ ಬಯಸದೆ ತತ್ವನಿರ್ಣಯವನರಿಯದವರೊಳು ತಾನೆಂಬುದನೆಲ್ಲಿಯೂ ತೋರದೆ; ಹೊನ್ನು ತನ್ನ ಲೇಸ ತಾನರಿಯದಂತೆ
ಬೆಲ್ಲ ತನ್ನ ಸಿಹಿಯ ತಾನರಿಯದಂತೆ
ವಾರಿಶಿಲೆ ಉದಕದೊಳಡಗಿದಂತೆ
ಪುಷ್ಪದೊಳಗೆ ಪರಿಮಳವಡಗಿದಂತೆ ಅಗ್ನಿಯೊಳಗೆ ಕರ್ಪೂರವಡಗಿದಂತೆ
ಮಹಾಲಿಂಗದಲ್ಲಿ ಲೀಯವಾದುದೆ ಲಿಂಗೈಕ್ಯ ಕಾಣಾ ಕೂಡಲಚೆನ್ನಸಂಗಮದೇವಾ