ಸಹಜದಿಂದ ನಿರಾಲಂಬವಾಯಿತ್ತು, ನಿರಾಲಂಬದಿಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಹಜದಿಂದ ನಿರಾಲಂಬವಾಯಿತ್ತು
ನಿರಾಲಂಬದಿಂದ ನಿರಾಳವಾಯಿತ್ತು. ನಿರಾಳದಿಂದ ನಿರವಯವಾಯಿತ್ತು
ನಿರವಯದಿಂದ ಅನಾದಿಯಾಗಿತ್ತು. ಅನಾದಿಯಲ್ಲಿ ಮೂರ್ತಿಯಾದನೊಬ್ಬ ಶರಣ. ಆ ಶರಣನ ಮೂರ್ತಿಯಿಂದ ಸದಾಶಿವನಾದ
ಆ ಸದಾಶಿವನ ಮೂರ್ತಿಯಿಂದ ಶಿವನಾದ
ಆ ಶಿವನ ಮೂರ್ತಿಯಿಂದ ರುದ್ರನಾದ
ಆ ರುದ್ರನ ಮೂರ್ತಿಯಿಂದ ವಿಷ್ಣುವಾದ. ಆ ವಿಷ್ಣುವಿನ ಮೂರ್ತಿಯಿಂದ ಬ್ರಹ್ಮನಾದ. ಆ ಬ್ರಹ್ಮನ ಮೂರ್ತಿಯಿಂದಾದವು ಸಕಲ ಜಗತ್ತುಗಳೆಲ್ಲಾ_ ಇವರೆಲ್ಲ ನಮ್ಮ ಗುಹೇಶ್ವರನ ಕರಸ್ಥಲದ ಹಂಗಿನಲ್ಲಿ ಹುಟ್ಟಿ ಬೆಳೆದರು