ಸಹಜವ ನುಡಿದಡೆ ಸೇರುವರಿಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಹಜವ ನುಡಿದಡೆ ಸೇರುವರಿಲ್ಲ ಕಾಣಿರಣ್ಣಾ. ಅಸಹಜಕ್ಕಲ್ಲದೆ ಲೋಕ ಭಜಿಸದು. ಕೆರೆಯ ಕಟ್ಟಿಸುವನ (ಕಟ್ಟುವನ?) ಕಂಡು ಒಡ್ಡರಾಮಯ್ಯನೆಂದಡೆ ಮುಳಿಸಿನಿಂದ ಲಿಂಗತನುವ ನೋಯಿಸುವರೆ ? ನಮ್ಮ ಗುಹೇಶ್ವರಲಿಂಗವು ಜಗದೊಳಗೆ ಪರಿಪೂರ್ಣವಾದ ಕಾರಣ
ಶರಣರ ನೋವು ಮರಳಿ
ಪಾತಕರ ತಾಗಿದಡೆ
ಅಲ್ಲಯ್ಯ ನೋಡಿ ನಗುತಿರ್ದನು