ಸಹಸ್ರಶೀರ್ಷನಾದಿಪುರುಷನು. ವೇದಪುರುಷನೊಬ್ಬ ಪುರುಷನು.
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಹಸ್ರಶೀರ್ಷನಾದಿಪುರುಷನು. ವೇದಪುರುಷನೊಬ್ಬ ಪುರುಷನು. ತ್ರಿಪಾದ ಊಧ್ರ್ವನೊಬ್ಬ ಪುರುಷನು. ಉದನ್ಮುಖನೊಬ್ಬ ಪುರುಷನು. ಉದಯಪುರುಷನೊಬ್ಬ ಪುರುಷನು. ವಿರಾಟ್ಪುರುಷನೊಬ್ಬ ಪುರುಷನು. ಆದಿಪುರುಷನೊಬ್ಬ ಪುರುಷನು. ವಿಯತ್ಪುರುಷನೊಬ್ಬ ಪುರುಷನು. ತದ್ವಿಯತ್ಪುರುಷ ಪುರುಷರಿಲ್ಲದ ಪ್ರಭೆ ನೋಡಿದರೆ
ವೇದನಾದಾತೀತ ತೂರ್ಯಪರಮಾನಂದ ನಿರವಯ ಷಟ್‍ತ್ರಿಂಶತ್‍ಪ್ರಭಾಪಟಲಪ್ರಭೆಯ ಬೆಳಗಿದೆ ನೋಡಿರೆ. ಬೆಳಗಿನೊಳಗಣ ಮಹಾಬೆಳಗಿನ ಬೆಳಗು ಕೂಡಲಸಂಗಯ್ಯ.