ಸಾಕಾರ ಸಂಗನಲ್ಲಿ ನಿರಾಕಾರವಿಲ್ಲೆಂದು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಾಕಾರ ಸಂಗನಲ್ಲಿ ನಿರಾಕಾರವಿಲ್ಲೆಂದು ನಿರಾಕರ ಸಂಗವನರಸಿ ತೊಳಲಿ ಬಳಲಿದೆನಯ್ಯಾ. ನಿಶ್ಚಿಂತ ನಿಜಭಜನೆ ನೆಲೆಗೊಳ್ಳದೆನಗೆ
ಭ್ರಾಂತು ಭ್ರಮೆಯಿಲ್ಲದಂತೆ ಎಂದಪ್ಪುದೋ ಎನಗೆ ಕೂಡಲಸಂಗಮದೇವಾ
ಕೇಳಯ್ಯಾ.