ಸಾಧಕದೆಸೆಯಲ್ಲಿ ಕುಲವನರಸಬಹುದಲ್ಲದೆ, ಸಿದ್ಧದೆಸೆಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಾಧಕದೆಸೆಯಲ್ಲಿ ಕುಲವನರಸಬಹುದಲ್ಲದೆ
ಸಿದ್ಧದೆಸೆಯಲ್ಲಿ ಅರಸಲಹುದೆ ? ಹಲವು ಜಾತಿಯ ಕಟ್ಟಿಗೆಯ ಸುಟ್ಟಲ್ಲಿ ಅಗ್ನಿಯೊಂದಲ್ಲದೆ ಅಲ್ಲಿ ಕಟ್ಟಿಗೆಗಳ ಕುರುಹು ಕಾಂಬುದೆ ? `ಶಿವಭಕ್ತಸಮಾವೇಶೇ ನ ಜಾತಿಪರಿಕಲ್ಪನಾ ಇಂಧನೇಷ್ವಗ್ನಿದಗ್ಧೇಷು ಕೋ ವಾ ಭೇದಃ ಪ್ರಕೀತ್ರ್ಯತೇ ' ಎಂದುದಾಗಿ
ಶಿವಜ್ಞಾನಸಿದ್ಧರಾದ ಶಿವಭಕ್ತರಲ್ಲಿ ಪೂರ್ವಜಾತಿಯನರಸುವ ಅರೆಮರುಳರನೇನೆಂಬೆ ಕೂಡಲಚೆನ್ನಸಂಗಮದೇವಾ.