ಸಾವನ್ನಕ್ಕರ ಶ್ರವವ ಮಾಡಿದಡೆ,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಾವನ್ನಕ್ಕರ ಶ್ರವವ ಮಾಡಿದಡೆ
ಇನ್ನು ಕಾದುವ ದಿನವಾವುದು ? ಬಾಳುವನ್ನಕ್ಕರ ಭಜಿಸುತ್ತಿದ್ದಡೆ
ತಾನಹ ದಿನವಾವುದು ? ಅರ್ಥವುಳ್ಳನ್ನಕ್ಕರ ಅರಿವುತ್ತಿದ್ದಡೆ
ನಿಜವನೆಯ್ದುವ ದಿನವಾವುದು ? ಕಾರ್ಯಕ್ಕೆ ಬಂದು
ಆ ಕಾರ್ಯ ಕೈಸಾರಿದ ಬಳಿಕ ಇನ್ನು ಮತ್ರ್ಯಲೋಕದ ಹಂಗೇಕೆ ? ತನಿರಸ ತುಂಬಿದ ಅಮೃತಫಲ ಒಮ್ಮಿಗೆ ತೊಟ್ಟುಬಿಡುವುದು ನೋಡಿರೆ
ದೃಷ್ಟಾಂತವ ! ಬಸವಣ್ಣ ಚೆನ್ನಬಸವಣ್ಣ ಮೊದಲಾದ ಪ್ರಮಥರು ಗುಹೇಶ್ವರಲಿಂಗದಲ್ಲಿ ನಿಜವನೈದಿ ನಿಶ್ಚಿಂತರಾಗಿರಯ್ಯಾ !