ಸಾವಿರ ಹೊನ್ನಿಂಗೆ ಸಾದಕೊಂಡು
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಾವಿರ ಹೊನ್ನಿಂಗೆ ಸಾದಕೊಂಡು ಸುಣ್ಣವ ಬೆರಸಿದಂತೆ ಮಾಡಿದೆಯಯ್ಯಾ. ಮೂರು ಲಕ್ಷದ ಬೆಲೆಗೆ ರತ್ನವ ಕೊಂಡು ಮಡುವಿನಲ್ಲಿ ಇಟ್ಟಂತೆ ಮಾಡಿದೆಯಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ
ಎನ್ನ ಮುಟ್ಟಿ ಪಾವನವ ಮಾಡಿ ಕಷ್ಟಸಂಸಾರಿಗೊಪ್ಪಿಸುವಂತೆ ಮಾಡಿದೆಯಯ್ಯಾ.