ಸಾಸಿರದೆಂಟನೆಯ ದಳದಲ್ಲಿ ಖೇಚರಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಾಸಿರದೆಂಟನೆಯ ದಳದಲ್ಲಿ ಖೇಚರಿ ಚಲ್ಲಣಗಟ್ಟಿ
ವಾಸುಗಿಯ ಫಣಾಮಣಿ ಪ್ರಜ್ವಲಿಸುವುದ ಕಂಡೆ. ಅಸುರರೆಲ್ಲ ತಮತಮಗಂಜಿ ಓಸರಿಸಿ ಮುಂದೆ ನಡೆವಲ್ಲಿ
ನಾಸಿಕ ಮನವ ಮುಸುಕುವುದ ಕಂಡೆ
ತಾ ಸುಖಸ್ವರೂಪನಾದ; ಸುಖ ಮುಖಪ್ರವೇಶದಿಂದ! ಗೋಸಾಸಿರ ನಡೆಗೆಟ್ಟವು ಗುಹೇಶ್ವರಾ
ನಿಮ್ಮುವ ನೆರೆದೆನಾಗಿ.