ಸಿದ್ಧರಾಮಯ್ಯನನುವ ನಿರ್ಬುದ್ಧಿ ಮನುಜರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಿದ್ಧರಾಮಯ್ಯನನುವ ನಿರ್ಬುದ್ಧಿ ಮನುಜರು ಎತ್ತಬಲ್ಲರೊ
ಸದ್ಯೋಜಾತವದನನೆ ಬಲ್ಲ. ಪಂಚಭೂತವ ಮಾಡಿದ ಘನಕ್ಕೆ ಘನವ ತೋರಿದ ಫಣಿಯ ಮಣಿಯ ತೊಡಗಿದ ಚತುರ್ದಶಭುವನದ ಹವಣನಾರು ಬಲ್ಲರೊ ? ಒಳಗು ಹೊರಗುವ ತೋರಲಿಲ್ಲ ! ಮನದ ಕೊನೆಯಲ್ಲಿ ಬೆಳಗುತಿಪ್ಪ ಗುಹೇಶ್ವರಲಿಂಗದಲ್ಲಿ ಸಿದ್ಧರಾಮಯ್ಯದೇವರು ತಾನೆ !