ಸುತ್ತಲಿಲ್ಲದ ವ್ಯಾಧ ಸುಳಿಯಲಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸುತ್ತಲಿಲ್ಲದ ವ್ಯಾಧ ಸುಳಿಯಲಿಲ್ಲದ ಮೃಗವು. ಒತ್ತಿದನು ಆ ಮೃಗವ ಇರುಬಿನಲ್ಲಿಗೆ ಅಯ್ಯಾ. `ಸೋವೋವ' `ಸೋವೋವ' ಎಂದೆನುತ್ತ ಒತ್ತಿದ ಮೃಗವು ಇರುಬುಗೊಂಡಿತ್ತು. ಇರುಬಿನ ಕುಳಿಯೊಳಗೆ ಕೊಲ್ಲದೆ ಕೊಂದನಲ್ಲಾ ಮೃಗವನು. ಅಳಿಯದೆ ಅಳಿದುದಲ್ಲಾ ! ಮಾಡಲಿಲ್ಲದ ಸಯದಾನ
ನೀಡಲಿಲ್ಲದ ಬೋನ ಅರ್ಪಿತವಿಲ್ಲದ ತೃಪ್ತಿ; ಗುಹೇಶ್ವರಲಿಂಗಕ್ಕೆ.