ವಿಷಯಕ್ಕೆ ಹೋಗು

ಸುತ್ತಿಸುತ್ತಿ ಬಂದಡಿಲ್ಲ, ಲಕ್ಷ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಸುತ್ತಿಸುತ್ತಿ ಬಂದಡಿಲ್ಲ
ಲಕ್ಷ ಗಂಗೆಯ ಮಿಂದಡಿಲ್ಲ. ತುಟ್ಟ ತುದಿಯ ಮೇರುಗಿರಿಯ ಮೆಟ್ಟಿ ಕೂಗಿದಡಿಲ್ಲ. ನಿತ್ಯನೇಮದಿಂದ ತನುವ ಮುಟ್ಟಿಕೊಂಡಡಿಲ್ಲ. ನಿಚ್ಚಕ್ಕಿನ ಗಮನವಂದಂದಿಗೆ; ಅತ್ತಲಿತ್ತ ಹರಿವ ಮನವ ಚಿತ್ರದಲಿ ನಿಲಿಸಬಲ್ಲಡೆ ಬಚ್ಚಬರಿಯ ಬೆಳಗು ಗುಹೇಶ್ವರನೆಂಬ ಲಿಂಗವು.