ಸುದತಿ ಪುತ್ರ ಮಿತ್ರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸುದತಿ ಪುತ್ರ ಮಿತ್ರ ಮಾತೃಪಿತೃರು ಹಿತರು ನಿತ್ಯರೆಂದು ಹದೆದು ಕುದಿದು ಕೋಟಲೆಗೊಂಬನ್ನಕ್ಕರ ಗುರುವೆಂದೇನಯ್ಯ. ಸುರಚಾಪದಂತೆ ತೋರಿ ಕೆಡುವ ಹೆಣ್ಣು ಹೊನ್ನು ಮಣ್ಣ ನಚ್ಚಿ ಮದಡನಾಗಿಪ್ಪನ್ನಕ್ಕರ ಲಿಂಗವೆಂದೇನಯ್ಯ. ಈ ಕಷ್ಟ ಸಂಸೃತಿಯ ಕೂಪತಾಪದೊಳಗೆ ಬಿದ್ದುರುಳುವ ನಾಮನಷ್ಟರಿಗೆ ಜಂಗಮಲಿಂಗವೆಂದೇನಯ್ಯ. ಈ ದುಷ್ಟದುರ್ಮಲತ್ರಯದ ಅಂಧಕಾರ ಘೋರತರವಿಕಾರ ಸರ್ಪದಷ್ಟರಾದ ದುಷ್ಟರಿಗೆ ಶಿವಸತ್ವಥವೆಂದೇನು ಹೇಳಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ. ಭಕ್ತನ ಮಾಹೇಶ್ವರ