ಸುಧೆಯೊಳಗೆ ವಿಷವುಂಟೆ? ಮಧುರದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸುಧೆಯೊಳಗೆ ವಿಷವುಂಟೆ? ಮಧುರದೊಳಗೆ ಕಹಿಯುಂಟೆ? ದಿನಮಣಿಯೊಳಗೆ ಕಪ್ಪುಂಟೆ? ಬೆಳದಿಂಗಳೊಳಗೆ ಕಿಚ್ಚುಂಟೆ? ಅಮೃತಸಾಗರದೊಳಗೆ ಬೇವಿನ ಬಿಂದುವುಂಟೆ? ಮಹಾಜ್ಞಾನಸ್ವರೂಪರಪ್ಪ ಶರಣರೇ ಲಿಂಗವೆಂದರಿದ ಮಹಾತ್ಮಂಗೆ ಸಂಕಲ್ಪ ಭ್ರಮೆಯುಂಟೆ? ಅದೇತರ ವಿಶ್ವಾಸ? ಸುಡು ಸುಡು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.