ವಿಷಯಕ್ಕೆ ಹೋಗು

ಸೂರ್ಯನಿಂದ ತೋರಿದ ಕಿರಣಂಗಳಿಗೂ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಸೂರ್ಯನಿಂದ ತೋರಿದ ಕಿರಣಂಗಳಿಗೂ ಆ ಸೂರ್ಯನಿಗೂ ಭಿನ್ನವುಂಟೇ?. ಚಂದ್ರನಿಂದ ತೋರಿದ ಕಲೆಗೆ ಆ ಚಂದ್ರನಿಗೂ ಭಿನ್ನವುಂಟೇ?. ಅಗ್ನಿಯಿಂದ ತೋರಿದ ಕಾಂತಿಗೂ ಆ ಅಗ್ನಿಗೂ ಭಿನ್ನವುಂಟೇ?. ಜ್ಯೋತಿಯಿಂದ ತೋರಿದ ಬೆಳಗಿಗೂ ಆ ಜ್ಯೋತಿಗೂ ಭಿನ್ನವುಂಟೇ?. ಅಗಮ್ಯ
ಅಗೋಚರ
ಅಪ್ರಮಾಣ
ಅಪ್ರತಿಮ ಮಹಾಲಿಂಗದಲ್ಲಿ ಜ್ಯೋತಿಯಿಂದ ಜ್ಯೋತಿ ಉದಯಿಸಿದಂತೆ ಉದಯಿಸಿದ ಶರಣಂಗೂ ಆ ಮಹಾಲಿಂಗಕ್ಕೂ ಭಿನ್ನವುಂಟೇ? ಇದ ಬೇರೆಂಬ ಅರೆಮರುಳುಗಳನೇನೆಂಬೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.