ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ
ವಾಯುವಿನ ಚಲನೆಯೆಲ್ಲಾ ಹಗಲಿನ ಪೂಜೆ. ಚಂದ್ರಪ್ರಕಾಶ ನಕ್ಷತ್ರ ಅಗ್ನಿವಿದ್ಯುತ್ತಾದಿ ದೀಪ್ತಿಮಯವೆನಿಸಿಪ್ಪವೆಲ್ಲಾ ಇರುಳಿನ ಪೂಜೆ. ನಿನ್ನ ಪ್ರಕಾಶದಲ್ಲಿ ಎನ್ನ ಮರೆದಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನಾ.