ಸೃಷ್ಟಿ ಮೊದಲವಸಾನ ಕಡೆಯಾಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸೃಷ್ಟಿ ಮೊದಲವಸಾನ ಕಡೆಯಾಗಿ ಅರಿವರಿವೆ ಜ್ಞಾನ
ಅಂತಪ್ಪ ಜ್ಞಾನವೆ ಚಿದ್ಬ್ರಹ್ಮ
ಆ ಚಿದ್ಬ್ರಹ್ಮ ಚಿದ್ಘನಲಿಂಗ ನೋಡಾ
ಅದೆಂತೆಂದಡೆ: ``ಸೃಷ್ಟ್ಯಾದ್ಯೈಕ್ಯಾಂತವಿಜ್ಞಾನೇ ಜ್ಞಾನಂಚಾತ್ಮಪ್ರಕಾಶಕಂ ! ತತ್‍ಜ್ಞಾನಂ ಪರಮಂ ಬ್ರಹ್ಮ ಲಿಂಗಮಿತ್ಯೇವ ಭಾವಯೇತ್ ಎಂದುದಾಗಿ
ನಿಮ್ಮನರಿದು ತನ್ನ ಮರೆದ ಪರಮ ಶಿವಯೋಗಿಗೆ ಪರಿಭವಂಗಳುಂಟೆ ಗುಹೇಶ್ವರಾ ?