ಸೆಟ್ಟಿಯೆಂದೆನೆ ಸಿರಿಯಾಳನ ಮಡಿವಾಳನೆಂಬೆನೆ

ವಿಕಿಸೋರ್ಸ್ದಿಂದ


Pages   (key to Page Status)   

ಸೆಟ್ಟಿಯೆಂದೆನೆ ಸಿರಿಯಾಳನ ಮಡಿವಾಳನೆಂಬೆನೆ ಮಾಚಯ್ಯನ ಡೋಹರನೆಂಬೆನೆ ಕಕ್ಕಯ್ಯನ ಮಾದಾರನೆಂಬೆನೆ ಚೆನ್ನಯ್ಯನ ಆನು ಹಾರುವನೆಂದಡೆ ಕೂಡಲಸಂಗಯ್ಯ ನಗುವನಯ್ಯಾ. 345