ಸ್ಥೂಲ ಸೂಕ್ಷ್ಮದೊಳಗೆ ಬೆಳಗುವ,

ವಿಕಿಸೋರ್ಸ್ದಿಂದ



Pages   (key to Page Status)   


ಸ್ಥೂಲ ಸೂಕ್ಷ್ಮದೊಳಗೆ ಬೆಳಗುವ
ಮಹಾಬೆಳಗಾಗಿ ಹೊಳೆವ
_ ಜ್ಞಾನಜ್ಯೋತಿ ದಳಗಳನೆಲ್ಲವ ಮೀರಿ
ನೆಳಲನುಂಗಿದ ಬಿಸಿಲೊಳಗೆ ಚಂದ್ರಮನುದಯ. ಜಲಧಿವಳಯದ ಬೆಳಸ ಹೇಳಲು ಆರ ಅಳವಲ್ಲ. ಆಳು ಆಳ್ದನ ನುಂಗಿ ಈರೇಳು ಭುವನವ ದಾಂಟಿ ಗುಹೇಶ್ವರ ನಿಂದ ನಿಲವು ಹೊರಗು ಒಳಗನೆ ನುಂಗಿತ್ತು.