ಸ್ವತಂತ್ರ ಪರತಂತ್ರಕ್ಕೆ ಆವುದು ಚಿಹ್ನ ನೋಡಾ. ತಾನೆಂಬುದ ಅಳಿದು ಇದಿರೆಂಬುದ ಮರೆದು
ಭಾವದಗ್ಧವಾಗಿರಬಲ್ಲಡೆ ಅದು ಸ್ವತಂತ್ರ. ನೀನೆಂಬುದ ಧಿಕ್ಕರಿಸಿ ತಾನೆಂಬುದ ನೀಕರಿಸಿ ಉಭಯ ಭಾವದಲ್ಲಿ ಸನ್ನಹಿತವಾಗಿರಬಲ್ಲಡೆ ಪರತಂತ್ರ. ಸ್ವತಂತ್ರ ಪರತಂತ್ರವೆಂಬೆರಡನೂ ವಿವರಿಸದೆ
ತನ್ನ ಮರೆದಿಪ್ಪಾತನೆ ಉಪಮಾತೀತನು. ಗುಹೇಶ್ವರನ ಶರಣರು ದೇಹವಿಲ್ಲದ ನಿರ್ದೇಹಿಗಳೆಂಬುದು ಇಂದೆನಗೆ ಕಾಣಬಂದಿತ್ತು ನೋಡಾ ಸಿದ್ಧರಾಮಯ್ಯಾ.