ಹಗಲಿರುಳ್ಗಳಿಲ್ಲದಂದು, ಮೇರು ಯುಗಜುಗಂಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಗಲಿರುಳ್ಗಳಿಲ್ಲದಂದು
ಯುಗಜುಗಂಗಳು ಮರಳಿ ಮರಳಿ ತಿರುಗದಂದು
ಗಗನ ಮೇರು ಕೈಲಾಸಂಗಳಿಲ್ಲದಂದು
ಖಗ ಮೃಗ ಶೈಲ ವೃಕ್ಷಂಗಳಿಲ್ಲದಂದು
ಅಜಹರಿಸುರಾಸುರ ಮನುಮುನಿಗಳಿಲ್ಲದಂದು
ಜಗದ ಲೀಲಾವೈಭವಂಗಳೇನೂ ಇಲ್ಲದಂದು
ಅಖಂಡೇಶ್ವರಾ
ನಿಮ್ಮ ನೀವರಿಯದೆ ಅನಂತಕಾಲವಿರ್ದಿರಂದು.