ಹತ್ತುಸಾವಿರ ಗೀತವ ಹಾಡಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹತ್ತುಸಾವಿರ ಗೀತವ ಹಾಡಿ ಅರ್ಥವಿಟ್ಟಲ್ಲಿ ಫಲವೇನು ಮುಟ್ಟುವ ತೆರನನರಿಯದನ್ನಕ್ಕ ಕಟ್ಟಿದಡೇನು ಬಿಟ್ಟಡೇನು ಮನವು ಲಿಂಗದಲ್ಲಿ ಮುಟ್ಟದನ್ನಕ್ಕ ಮಾತಿನಲೆ ಒಲಿಸಿ ಮಹತ್ತಪ್ಪ ಲಿಂಗವ ಕಂಡೆಹೆನೆಂಬ ಪಾತಕರ ಮೆಚ್ಚ ನಮ್ಮ ಕೂಡಲಸಂಗಮದೇವ.