ವಿಷಯಕ್ಕೆ ಹೋಗು

ಹದಿನಾರಿದ್ದಡೆ ಎಂಟಮಾಡುವ ಸಂಗಯ್ಯದೇವರು,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹದಿನಾರಿದ್ದಡೆ ಎಂಟಮಾಡುವ ಸಂಗಯ್ಯದೇವರು
ಎಂಟಿದ್ದಡೆ ನಾಲ್ಕಮಾಡುವ ಸಂಗಯ್ಯದೇವರು
ನಾಲ್ಕಿದ್ದಡೆ ಎರಡಮಾಡುವ ಸಂಗಯ್ಯದೇವರು
ಎರಡಿದ್ದಡೆ ಒಂದಮಾಡುವ ಸಂಗಯ್ಯದೇವರು
ಆ ಒಂದ ಇಲ್ಲವೆಯ ಮಾಡುವ ಸಂಗಯ್ಯದೇವರು
ತಿರಿಕನ ಶೋಭಿತನ ಮಾಡುವ ಸಂಗಯ್ಯದೇವರು
ತಿರಿ [ತಿ]ನಹೋದಡೆ ಹುಟ್ಟದೆನಿಸುವ ಸಂಗಯ್ಯದೇವರು. ಇದಾವುದಕ್ಕೂ ಸೆಡೆಯದಿದ್ದಡೆ ಕೂಡಲಸಂಗಮದೇವರು ತನ್ನಂತೆ ಮಾಡುವ.