ಹನ್ನೆರಡುಯುಗ ಪ್ರಳಯವಾದಲ್ಲಿ, ಆದಿಬ್ರಹ್ಮಂಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹನ್ನೆರಡುಯುಗ ಪ್ರಳಯವಾದಲ್ಲಿ
ಆದಿಬ್ರಹ್ಮಂಗೆ ಪ್ರಳಯ. ಆದಿಬ್ರಹ್ಮನ ಪ್ರಳಯ ಅಳಿದುಳಿದಲ್ಲಿ
ಮೀನಜರಿಗೊಂದು ಸಿಂಪಿನ ಪ್ರಳಯ. ಮೀನಜರಿಗೆ ಮೀನ ಪ್ರಳಯವಾದಲ್ಲಿ
ಅಸಹಸ್ರನೆಂಬ ಗಣೇಶ್ವರಂಗೆ ಒಂದು ಪ್ರಳಯ. ಆ ಅಸಹಸ್ರನೆಂಬ ಗಣೇಶ್ವರನು ಪ್ರಳಯದಲ್ಲಿ ಅಳಿದುಳಿದಲ್ಲಿ
ಅಕ್ಷಯನೆಂಬ ಗಣೇಶ್ವರಂಗೆ ಒಂದು ತಲೆಯ ಪ್ರಳಯ ಆ ಅಕ್ಷಯನೆಂಬ ಗಣೇಶ್ವರಂಗೆ ಅರುವತ್ತುಕೋಟಿ ತಲೆ. ಇಂತಹ ರುದ್ರಾವತಾರ ಹಲವಳಿದಡೆ
ಗುಹೇಶ್ವರಲಿಂಗವನೆಂದೂ ಅರಿಯ !