ಹರನೀವ ಕಾಲಕ್ಕೆ ಸಿರಿಯು ಬೆನ್ನಲಿ ಬರ್ಕು ಹರಿದು ಹೆದ್ದೊರೆಯು ಕೆರೆ ತುಂಬಿದಂತಯ್ಯಾ ನೆರೆಯದ ವಸ್ತು ನೆರೆವುದು ನೋಡಯ್ಯಾ ಅರಸು ಪರಿವಾರ ಕೈವಾರ ನೋಡಯ್ಯಾ. ಪರಮ ನಿರಂಜನನ ಮರೆವ ಕಾಲಕ್ಕೆ ತುಂಬಿದ ಹರವಿಯ ಕಲ್ಲುಕೊಂಡಂತೆ ಕೂಡಲಸಂಗಮದೇವಾ. 169