ಹರನೆ ನೀನೆನಗೆ ಗಂಡನಾಗಬೇಕೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹರನೆ ನೀನೆನಗೆ ಗಂಡನಾಗಬೇಕೆಂದು ಅನಂತಕಾಲ ತಪಸ್ಸಿದ್ದೆ ನೋಡಾ. ಹಸೆಯಮೇಲಣ ಮಾತ ಬೆಸಗೊಳಲಟ್ಟಿದಡೆ
ಶಶಿಧರನ ಹತ್ತಿರಕೆ ಕಳುಹಿದರೆಮ್ಮವರು. ಭಸ್ಮವನೆ ಹೂಸಿ
ಕಂಕಣವನೆ ಕಟ್ಟಿದರು ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದ.