ವಿಷಯಕ್ಕೆ ಹೋಗು

ಹರಹರಾ, ಸುರಧೇನುವಿದ್ದು ಎನ್ನ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya


ಹರಹರಾ
ಎನ್ನ ಬಡಮನದ ಅಳಿಯಾಸೆಯ ನೋಡಾ ! ಸುರಧೇನುವಿದ್ದು ಬರಡಾಕಳಿಗೆ ಆಸೆಮಾಡುವಂತೆ
ಕಲ್ಪವೃಕ್ಷವಿದ್ದು ಕಾಡಮರಕ್ಕೆ ಕೈಯಾನುವಂತೆ
ಚಿಂತಾಮಣಿಯಿದ್ದು ಗಾಜಿನಮಣಿಯ ಬಯಸುವಂತೆ
ಎನ್ನ ಕರ ಮನ ಭಾವದಲ್ಲಿ ನೀವು ಭರಿತರಾಗಿರ್ದುದ ಮರೆತು ನರರಿಗಾಸೆಯ ಮಾಡಿ ಕೆಟ್ಟೆನಯ್ಯ ಅಖಂಡೇಶ್ವರಾ.