ವಿಷಯಕ್ಕೆ ಹೋಗು

ಹರಿಯ ಬೇಡುವಡೆ ಅವಗೆ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹರಿಯ ಬೇಡುವಡೆ ಅವಗೆ ಬಲೀಂದ್ರ ದಾನವನಿಕ್ಕಿದನು
ಬ್ರಹ್ಮನ ಬೇಡುವಡೆ ಅವಗೆ ಶಿರವಿಲ್ಲ
ಚೌದ್ಧನ ಬೇಡುವಡೆ ಅವಗೆ ಬುದ್ಧಿ ಸಮನಿಸದು
ಜಿನನ ಬೇಡುವಡೆ ಅವಗೆ ಉಡಲಿಲ್ಲ
ಬೆನಕನ ಬೇಡುವಡೆ ಅವಗೆ ಕೋಡು ಮುರಿಯಿತ್ತು
ಭೈರವನ ಬೇಡುವಡೆ ಅವ ಉಟ್ಟುದನಿಕ್ಕಿ ಆಡುತ್ತಿರ್ದನು. ಅಭಯಂಕರ ಜಗಕ್ಕೆಲ್ಲ ! ಜಗದಾನಿಯ ಬೇಡುವೆನು ಕೂಡಲಸಂಗಯ್ಯನ.