ಹರಿಹರಿ ಎಂದಡೆ ಹರಿದರಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹರಿಹರಿ ಎಂದಡೆ ಹರಿದರಯ್ಯಾ ಹನ್ನಿಬ್ಬರು ಪರಿಚಾರಕರು ಹರಿದು ಬಂದು ಚರಣಕ್ಕೆರಗಿ ಬಿಜಯಂಗೆಯ್ಸಿ ಎಂದೆನೆ ಬಿಜಯಂಗೆಯ್ಯದಿರಲು
ಕರವಾಳ ಶಿರಕಿಕ್ಕಿ ಸೆಳೆದು ನೋಡಿದರು. ನಿರವಲಯ ತನು ಖಡ್ಗಕ್ಕೆ ಸಿಲುಕುವುದೆ ? ಹಿರಿಯರಾರೊ ? ಕಿರಿಯರಾರೊ ? ಭಕ್ತಿಯ ಸಕೀಲವ ಬಲ್ಲವರಾರೊ ? ಶಿರ ಹೋದ ಬಳಿಕ ಸರವೆಲ್ಲಿಯದೊ ? ಸಬುದವೆಲ್ಲಿಯದೊ ? ಶಿವಶರಣರ ಅಂತರಂಗವನರಿಯದೆ ಮರುಳಾದನು ನೋಡಾ ನಮ್ಮ ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣನು !