ಹರಿ ಹೊಲಬನರಿಯ, ಬ್ರಹ್ಮ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹರಿ ಹೊಲಬನರಿಯ
ಬ್ರಹ್ಮ ಮುಂದನರಿಯ
ರುದ್ರ ಲೆಕ್ಕವ ಮರೆದು ಜಪವನೆಣಸುತ್ತೆ ೈದಾನೆ. ಈಶ್ವರ ಪವನಯೋಗದಲ್ಲಿ ಮಗ್ನನಾದ. ಸದಾಶಿವ ಭಾವದಲ್ಲಿ ಭ್ರಮಿತನಾದ. ಒಂದಂಡಜದೊಳಗಣ ಬಾಲಕರೈವರು
ನಿಮ್ಮನೆತ್ತ ಬಲ್ಲರು ಗುಹೇಶ್ವರಾ.