ಹಲವುಕಾಲ ಧಾವತಿಗೊಂದು ಒಟ್ಟಿದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಲವುಕಾಲ ಧಾವತಿಗೊಂದು ಒಟ್ಟಿದ ಹಿದಿರೆಯು ಒಂದು ಮಿಡುಕುರಲ್ಲಿ ಬೇವಂತೆ
ಸಲೆ ನೆಲೆ ಸನ್ನಿಹಿತನಾಗಿಪ್ಪ ಶರಣನ ಭಕ್ತಿ ಒಂದನಾಯತದಿಂದ ಕೆಡುವುದು. [ಸು]ಧರ್ಮದಲ್ಲಿ ಗಳಿಸಿದ ಪಿತನ ಧನವ ಅಧರ್ಮದಲ್ಲಿ ಕೆಡಿಸುವ ಸುತನಂತೆ- ಶಿವನ ಸೊಮ್ಮ ಶಿವಂಗೆ ಮಾಡದೆ
ಅನ್ಯಕ್ಕೆ ಮಾಡಿದಡೆ
ತನ್ನ ಭಕ್ತಿ ತನ್ನನೆ ಕೆಡಿಸುವುದು ಕೂಡಲಸಂಗಮದೇವಾ ! 213