ವಿಷಯಕ್ಕೆ ಹೋಗು

ಹಲವು ಬಣ್ಣದ ಊರೊಳಗೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಹಲವು ಬಣ್ಣದ ಊರೊಳಗೆ ಉರಿವ ಜ್ಯೋತಿಯ ಹಿಡಿದು ಪರಿಪರಿಯ ಕೇರಿಯಲ್ಲಿ ಸುಳಿದಾಡುವಳಿವಳಾರೋ? ಈ ಊರಿಗೆ ನಾನೊಡತಿ; ಇಲ್ಲಿ ಸುಳಿಯುವುದಕ್ಕೆ ನಿನಗೇನು ಕಾರಣ ಹೇಳಾ? ಈ ಊರಿಗೂ ನಿನಗೂ ನಾನೊಡತಿಯೆನುತ ಊರ ಸುಟ್ಟು ನಾರಿಯ ಕೊಂದವಳು ನಾನು ಪರಾಪರಾಂಗನೆಯೆನುತ ಸ್ವಪತಿಯ ನೆರೆದು ನಿಷ್ಪತಿಯನೆಯಿದುದ ಕಂಡು ಬೆರಗಾದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.