ಹವಣಲ್ಲದ ಶಾಖೆಯ ಕಪಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹವಣಲ್ಲದ ಶಾಖೆಯ ಕಪಿ ಹಿಡಿಯಲೊಲ್ಲದು. ಗಮನವಿಲ್ಲದ ಪಿಕಶಿಶು ನುಡಿಯಲರಿಯದು. ಪ್ರಭಾವಿಸಿದಲ್ಲದೆ ಉಲಿಯದು ಕುಕ್ಕಟ. ಇಂತೀ ತ್ರಿವಿಧದ ಭೇದವ ನೋಡಿರೆ ಭಕ್ತರಪ್ಪಡೆ ! ಹೂ ಮಿಡಿಯ ಹರಿದಡೆ ಹಣ್ಣಪ್ಪುದೆ ? ಹಸಿವು ತೃಷೆ ವಿಷಯ ಉಳ್ಳನ್ನಕ್ಕ ಅದ್ವೈತ ಉಂಟೆ ಜಗದೊಳಗೆ ? ತನ್ನ ಮರೆದು ಲಿಂಗವ ಮರೆವುದು
ತನ್ನ ಮರೆಯದೆ ಲಿಂಗವ ಮರೆವ ಯೋಗವಿನ್ನೆಂತಾದುದೊ ? ಸುಡು
ಸುಡು
ಅವಂದಿರು ಗುರುದ್ರೋಹಿಗಳು ಆಚಾರಭ್ರಷ್ಟರು. ಈ ಉಭಯ ತನುಗುಣ ನಾಸ್ತಿಯಾಗದನ್ನಕ್ಕ;_ ಸತ್ಕ್ರಿಯೆಯಿಂದ ಮಾಡುವುದು ಲಿಂಗದಾಸೋಹವ. ಭಯಭಕ್ತಿಯಿಂದ ಮಾಡುವುದು ಜಂಗಮದಾಸೋಹವ. ತನು ಕರಗದೆ ಮನ ಬೆರಸದೆ ನಿಮಗೆ ಮಾಡುವ ವ್ರತಗೇಡಿಗಳ ಎನಗೆ ತೋರದಿರಾ ಗುಹೇಶ್ವರ.