ಹಸಿದಳುವ ಶಿಶುವಿಂಗೆ ತಾಯಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಸಿದಳುವ ಶಿಶುವಿಂಗೆ ತಾಯಿ ಮೊಲೆಯ ಕೊಟ್ಟಡೆ
ಆ ಶಿಶು ಜೀವಿಸದಿಪ್ಪುದೆ ಹೇಳಾ
ಅಯ್ಯಾ ಪ್ರಾಣವಲ್ಲಭನ ಅಗಲಿಕೆಯಿಂದ ಪ್ರಾಣವಿಯೋಗವಾಗಿಹ ಹೆಂಗೂಸಿಂಗೆ ಆ ಪ್ರಾಣವಲ್ಲಭ ಬಂದಡೆ ವಿರಹ ಸಂತವಿಸದಿಪ್ಪುದೆ ಹೇಳಾ
ಅಯ್ಯಾ ಕೂಡಲಸಂಗಮದೇವರು ಸಾಕ್ಷಿಯಾಗಿ ಪ್ರಭುವೆನ್ನ ಮನೆಗೆ ಬಂದಡೆ ಎನ್ನ ಬಯಕೆ ಕೈಸಾರಿ ಚೆನ್ನಬಸವಣ್ಣನ ಕರುಣದ ಕಂದನಾಗಿ ಉಳಿದೆನು ಕಾಣಾ
ಮಡಿವಾಳಯ್ಯಾ.