ವಿಷಯಕ್ಕೆ ಹೋಗು

ಹಸಿವಾದಡುಂಬುದನು, ಸತಿಯ ಸಂಭೋಗವನು

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹಸಿವಾದಡುಂಬುದನು
ಸತಿಯ ಸಂಭೋಗವನು ಆನಾಗಿ ನೀ ಮಾಡೆಂಬವರುಂಟೆ ಮಾಡುವುದು
ಮಾಡುವುದು ಮನಮುಟ್ಟಿ
ಮಾಡುವುದು
ಮಾಡುವುದು ತನುಮುಟ್ಟಿ
ತನುಮುಟ್ಟಿ ಮನಮುಟ್ಟದಿರ್ದಡೆ ಕೂಡಲಸಂಗಮದೇವನೇತರಲ್ಲಿಯೂ ಮೆಚ್ಚ. 182