ಹಸಿವಾದಡೆ ಊರೊಳಗೆ ಬ್ಥಿಕ್ಷಾನ್ನಗಳುಂಟು.
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹಸಿವಾದಡೆ ಊರೊಳಗೆ ಬ್ಥಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು ದೇಗುಲಗಳುಂಟು. ಚೆನ್ನಮಲ್ಲಿಕಾರ್ಜುನಯ್ಯಾ
ಆತ್ಮಸಂಗಾತಕ್ಕೆ ನೀನೆನಗುಂಟು.