ವಿಷಯಕ್ಕೆ ಹೋಗು

ಹಸಿವಾಯಿತ್ತೆಂದು ಅರ್ಪಿತವ ಮಾಡುವರಯ್ಯಾ,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹಸಿವಾಯಿತ್ತೆಂದು ಅರ್ಪಿತವ ಮಾಡುವರಯ್ಯಾ
ತೃಷೆಯಾಯಿತ್ತೆಂದು ಮಜ್ಜನಕ್ಕೆರೆವರಯ್ಯಾ
ಹಸಿವು ತೃಷೆ ವಿಷಯಕ್ಕೆ ಬಳಲುವರಯ್ಯಾ. ಹಸಿವಾಯಿತ್ತೆಂದು ಅರ್ಪಿತವ ಮಾಡಲಿಲ್ಲ
ತೃಷೆಯಾಯಿತ್ತೆಂದು ಮಜ್ಜನಕ್ಕೆರೆಯಲಿಲ್ಲ
ಇದು ಕಾರಣ ಕೂಡಲಸಂಗಮದೇವ ಪೂಜಿಸಿ
ಪ್ರಸಾದವ ಹಡೆವರೊಬ್ಬರೂ ಇಲ್ಲ.