ವಿಷಯಕ್ಕೆ ಹೋಗು

ಹಾಡಿ ಮಾಡುವರೆಲ್ಲ ಹಾದರಗಿತ್ತಿಯ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹಾಡಿ ಮಾಡುವರೆಲ್ಲ ಹಾದರಗಿತ್ತಿಯ ಮಕ್ಕಳಯ್ಯಾ
ಕೂಡಿ ಮಾಡುವರೆಲ್ಲ ಕುಂಟಣಿಗಿತ್ತಿಯ ಮಕ್ಕಳಯ್ಯಾ
ಬೇಡಿ ಮಾಡುವರೆಲ್ಲ ಬೇಡಿತಿಯ ಮಕ್ಕಳಯ್ಯಾ
ಡಂಬಕತನದಲ್ಲಿ ಮಾಡುವರೆಲ್ಲ ಡೊಂಬಗಿತ್ತಿಯ ಮಕ್ಕಳಯ್ಯಾ
ಅಚ್ಚ ಪ್ರಸಾದಿಗಳೆಂಬವರೆಲ್ಲ ಮುಚ್ಚಗಿತ್ತಿ[ಮಾದಗಿತ್ತಿ ?]ಯ ಮಕ್ಕಳಯ್ಯಾ
ಸಮಯಾಚಾರದಲ್ಲಿಪ್ಪವರೆಲ್ಲ ಸಮ್ಮಗಾರಿಯ ಮಕ್ಕಳಯ್ಯಾ
ಜಂಗಮ ಬಂದ ಬರವ
ನಿಂದ ನಿಲುಕಡೆಯ ನೋಡಿ
ಮಾಡಿ ನೀಡಿ ಸ್ವಯಾನುಭಾವದ ಸಮ್ಯಗ್‍ಜ್ಞಾನವನರಿವವರು ಕೂಡಲಚೆನ್ನಸಂಗನ ಶರಣರಯ್ಯಾ.