ಹಾರುವನ ಭಕ್ತಿ ಓಡಿನೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾರುವನ ಭಕ್ತಿ ಓಡಿನೊಳಗೆ ಅಗೆಯ ಹೊಯ್ದಂತೆ ಕೆಳಯಿಂಕೆ ಬೇರೂರದು
ಮೇಲೆ ಫಲವಾಗದು. ಪ್ರಾಣಲಿಂಗದ ಪ್ರಸಾದವ ಮುಂದಿಟ್ಟುಕೊಂಡು `ಪ್ರಾಣಾಯ ಸ್ವಾಹಾ
ಅಪಾನಾಯ ಸ್ವಾಹಾ
ವ್ಯಾನಾಯ ಸ್ವಾಹಾ
ಉದಾನಾಯ ಸ್ವಾಹಾ
ಸಮಾನಾಯ ಸ್ವಾಹಾ ಎಂಬ ಕರ್ಮಿಗಳನೇನೆಂಬೆ
ಕೂಡಲಸಂಗಮದೇವಾ.