ಹಾರುವರೆಲ್ಲರೂ ನೆರೆದು ಶೂದ್ರನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾರುವರೆಲ್ಲರೂ ನೆರೆದು ಶೂದ್ರನ ಹಾರುವನ ಮಾಡುವಲ್ಲಿ ನಂದಿಮುಖವಿಲ್ಲದೆ ಮತ್ತೇನನೂ ಮಾಡಲಾಗದು. ವಿಭೂತಿ[ಯಿ]ಲ್ಲದೆ ಮತ್ತೇನನೂ ಮಾಡಲಾಗದು. `ಭರ್ಗೋ ದೇವಃ ಎಂಬ ಮಂತ್ರ[ವಿ]ಲ್ಲದೆ ಮತ್ತೇನನೂ ಮಾಡಲಾಗದು. ನಿಮ್ಮಿಂದ ಕುಲಜರಾಗಿ ಮತ್ತೆ ಅನ್ಯದೈವಕ್ಕೆರಗುವ ಜಗದನ್ಯಾಯಿಗಳನೇನೆಂಬೆ
ಕೂಡಲಸಂಗಮದೇವಾ !