Library-logo-blue-outline.png
View-refresh.svg
Transclusion_Status_Detection_Tool

ಹಾಲಹಿಡಿದು ಬೆಣ್ಣೆಯನರಸಲುಂಟೆ ?

ವಿಕಿಸೋರ್ಸ್ದಿಂದ
Jump to navigation Jump to searchPages   (key to Page Status)   


ಹಾಲಹಿಡಿದು ಬೆಣ್ಣೆಯನರಸಲುಂಟೆ ? ಲಿಂಗವಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ? ಲಿಂಗದ ಪಾದತೀರ್ಥ ಪ್ರಸಾದವ ಕೊಂಡು ಅನ್ಯಬೋಧೆ ಅನ್ಯಶಾಸ್ತ್ರಕ್ಕೆ ಹಾರೈಸಲೇತಕ್ಕೆ ? ಇಷ್ಟಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಶರಣೆಂದೆನಾದಡೆ ತಡೆಯದೆ ಹುಟ್ಟಿಸುವನು ಶ್ವಾನನ ಗರ್ಭದಲ್ಲಿ. ಅದೆಂತೆಂದಡೆ ಶಿವಧರ್ಮಪುರಾಣದಲ್ಲಿ 'ಇಷ್ಟಲಿಂಗಮವಿಶ್ವಸ್ಯ ತೀರ್ಥಲಿಂಗಸ್ಯ ಪೂಜಕಃ ೀ ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್'