ಹಾಲೋಗರವನುಂಡು ಬಾಲೆಯರ ತೋಳಮೇಲೊರಗಿದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಾಲೋಗರವನುಂಡು ಬಾಲೆಯರ ತೋಳಮೇಲೊರಗಿದಡೆ ಬಾರದ ಭವದಲ್ಲಿ ಬಪ್ಪುದು ತಪ್ಪದು ಕಾಣಿರಣ್ಣ. ಅಲ್ಲಿಯ ಆಲಿಂಗನ ವಿಷ
ಚುಂಬನ ನಂಜು
ನೋಟ ಸರಳು
ಸವಿನುಡಿ ಕಠಾರಿ ನೋಡಾ. ಅಲ್ಲಿಯ ನೆನಹು ಆಜ್ಞಾನ ನೋಡಾ. ಅದು ತನ್ನ ಹಿತಶತ್ರುತನದಿಂದ ಭ್ರಾಂತುಭಾವನೆಯ ಹುಟ್ಟಿಸಿ ಕೊಲುವದಾಗಿ
ಆ ಸಂಸಾರ ನಿನಗೆ ಹಗೆಯೆಂದು ತಿಳಿಯ
ಮರುಳುಮಾನವ. ಇದುಕಾರಣ
ಸಂಸಾರಸುಖವನುಣ್ಣಲೊಲ್ಲದೆ
ಬಾಲೇಂದುಮೌಳಿಯ ಜ್ಞಾನಪ್ರಸಾದವನುಂಡು ನಾನು ಬದುಕಿದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.