ಹಾಲ ಹಿಡಿದು ಬೆಣ್ಣೆಯನರಸಲುಂಟೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಾಲ ಹಿಡಿದು ಬೆಣ್ಣೆಯನರಸಲುಂಟೆ ? ಲಿಂಗವ ಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ? ಲಿಂಗಸಂಗವ ಮಾಡಿಹೆನೆಂಬಾತಂಗೆ ಅನ್ಯದೈವಭಜನೆ ಏತಕ್ಕಯ್ಯಾ ? ``ಇಷ್ಟಲಿಂಗಮವಿಶ್ವಸ್ಯ
ಯೋsನ್ಯದೈವಮುಪಾಸತೇ ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ ಇಂತೆಂದುದಾಗಿ
ಇಂತಪ್ಪ ಪಾತಕಂಗೆ ಅಘೋರನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.